ಕನ್ನಡ English हिन्दी తెలుగు मराठी ગુજરાતી বাংলা தமிழ் മലയാളം ਪੰਜਾਬੀ অসমীয়া

State News

ಇಂಡಿಗೋ ಎಫೆಕ್ಟ್​​: ಏರ್​ಲೈನ್ಸ್​ಗಳಿಂದ ಪ್ರಯಾಣಿಕರ ಸುಲಿಗೆಗೆ ದೆಹಲಿ ಹೈಕೋರ್ಟ್​​ ಕಿಡಿ; ಕೇಂದ್ರಕ್ಕೆ ಚಾಟಿ

Posted By: devarajnaik0
Updated on: Dec 10, 2025 | 9:13 AM

ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನಲೆ, ಏರ್​ಲೈನ್ಸ್​ಗಳು ಪ್ರಯಾಣಿಕರಿಂದ ಮನಬಂದಂತೆ ಶುಲ್ಕ ವಸೂಲಿ ಮಾಡಿವೆ. 40 ಸಾವಿರದವರೆಗೆ ವಿಮಾನ ದರ ಏರಿಕೆ ಬಗ್ಗೆ ದೆಹಲಿ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನ್ಯಾಯಾಲಯ, ಪರಿಸ್ಥಿತಿ ಬಗ್ಗೆ ಆತಂಕ ವ್ಯಕ್ತಪಡಿಸಿದೆ.

ದೆಹಲಿ, ಡಿಸೆಂಬರ್​​ 10: ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನೆಲೆ ಕೇಂದ್ರ ಸರ್ಕಾರವನ್ನ ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ವಿಮಾನ ಪ್ರಯಾಣ ದರ 40 ಸಾವಿರ ಆಗಲು ಹೇಗೆ ಸಾಧ್ಯ? ಅದನ್ನ ತಡೆಯಲು ಯಾಕೆ ಆಗಲಿಲ್ಲ ಎಂದು ಪ್ರಶ್ನೆ ಮಾಡಿರುವ ನ್ಯಾಯಮೂರ್ತಿ ಡಿ.ಕೆ.ಉಪಾಧ್ಯಾಯ ಅವರದಿದ್ದ ಪೀಠ, ಪರಿಸ್ಥಿತಿಯನ್ನ ಆತಂಕಕಾರಿ ಎಂದಿದೆ.

ಬಿಕ್ಕಟ್ಟು ಸಂದರ್ಭದಲ್ಲಿ ಇತರ ವಿಮಾನಯಾನ ಸಂಸ್ಥೆಗಳಿಗೆ ಲಾಭ ಪಡೆಯಲು ಹೇಗೆ ಅನುಮತಿಸಬಹುದು? ಅದು 35-40 ಸಾವಿರ ಹಣ ಕೊಟ್ಟು ಹೇಗೆ ಹೋಗಲು ಸಾಧ್ಯ? ನೀವು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಲು ಬಿಟ್ಟಿದ್ದೀರಿ. ಇಂತಹ ಪರಿಸ್ಥಿತಿಯು ಪ್ರಯಾಣಿಕರಿಗೆ ಅನಾನುಕೂಲತೆಯನ್ನು ಉಂಟುಮಾಡುವುದಕ್ಕೆ ಸೀಮಿತವಾಗಿಲ್ಲ. ಬದಲಾಗಿ ದೇಶದ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತದೆ ಎಂದುಕೇಂದ್ರದ ನಡೆ ಬಗ್ಗೆ ದೆಹಲಿ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಪ್ರಯಾಣಿಕರು ಸಂಕಷ್ಟ ಅನುಭವಿಸುತ್ತಿರುವ ನಡುವೆ ಉಳಿದ ಏರ್​​ಲೈನ್​ಸ್ಗಳು ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದ್ದವು. ಟಿಕೆಟ್​​ ದರವನ್ನು ಮನಬಂದಂತೆ ಏರಿಸಿದ್ದ ಪರಿಣಾಮ ದುಪ್ಪಟ್ಟು ಹಣ ಕೊಟ್ಟು ಪ್ರಯಾಣಿಸಬೇಕಾದ ಸ್ಥಿತಿ ಉದ್ಭವಿಸಿತ್ತು. ಬಸ್​​ಗಳ ದರವೂ ಗಗನಮುಖಿಯಾದ ಕಾರಣ ಪ್ರಯಾಣಿಕರು ಈ ಬಗ್ಗೆ ಕಿಡಿ ಕಾರಿದ್ದರು. ಇದೇ ವಿಚಾರವಾಗಿ ಈಗ ದೆಹಲಿ ಹೈಕೋರ್ಟ್​​ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಇಂಡಿಗೋ ವಿಮಾನಗಳ ಹಾರಾಟದಲ್ಲಿ ಚೇತರಿಕೆ

ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​ನಿಂದ ಹಾರಾಟ ನಡೆಸುವ ಇಂಡಿಗೋ ಏರ್​ಲೈನ್ಸ್​ ವಿಮಾನಗಳ ಸಂಚಾರದಲ್ಲಿ ಚೇತರಿಕೆ ಕಂಡುಬಂದಿದೆ. ಇಂದು 58 ವಿಮಾನಗಳ ಹಾರಾಟ ಮಾತ್ರ ಕ್ಯಾನ್ಸಲ್​ ಆಗಿವೆ. ಏರ್​ಪೋರ್ಟ್​ನಿಂದ ನಿರ್ಗಮಿಸಬೇಕಿದ್ದ 26 ವಿಮಾನಗಳು ಮತ್ತು ಆಗಮಿಸಬೇಕಿದ್ದ 32 ಇಂಡಿಗೋ ಫ್ಲೈಟ್ಸ್​ ರದ್ದಾಗಿವೆ. ನಿನ್ನೆ ಒಟ್ಟು 121 ಇಂಡಿಗೋ ವಿಮಾನಗಳ ಹಾರಾಟ ಕ್ಯಾನ್ಸಲ್ ಆಗಿತ್ತು

Shorts Shorts