ಕನ್ನಡ English हिन्दी తెలుగు मराठी ગુજરાતી বাংলা தமிழ் മലയാളം ਪੰਜਾਬੀ অসমীয়া

State News

ಧರ್ಮಸ್ಥಳ ಬುರುಡೆ ಕೇಸ್​​ಗೆ ಮೇಜರ್​​ ಟ್ವಿಸ್ಟ್​​: SIT ತನಿಖೆಯಿಂದ ಕೊನೆಗೂ ಬಯಲಾಯ್ತು ಸತ್ಯ!

Posted By: devarajnaik0
Updated on: Dec 10, 2025 | 8:19 AM

ಧರ್ಮಸ್ಥಳ ‘ಬುರುಡೆ’ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಎಸ್​ಐಟಿ ತನಿಖೆಯಲ್ಲಿ  ಸತ್ಯ ಹೊರಬಂದಿದ್ದು, ಎಲ್ಲ ಮಾಹಿತಿಯನ್ನು ತನಿಖಾ ವರದಿ ಬಟಾಬಯಲು ಮಾಡಿದೆ. ಆ ಮೂಲಕ ಧರ್ಮಸ್ಥಳದಲ್ಲಿ ನೂರಾರು ಅಪರಿಚಿತ ಶವ ಹೂಳಲಾಗಿತ್ತು ಎಂಬ ಆರೋಪಕ್ಕೆ ಬಹುತೇಕ ತೆರೆ ಬಿದ್ದಿದ್ದು, ಆರೋಪಿಗಳ ಎದೆಯಲ್ಲಿ ನಡುಕ ಶುರುವಾಗಿದೆ.

ಮಂಗಳೂರು, ಡಿಸೆಂಬರ್​​ 10: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರೋದಾಗಿ ಮಾಸ್ಕ್​​ಮ್ಯಾನ್​​ ಚಿನ್ನಯ್ಯ ಆರೋಪಿಸಿದ್ದ ಹಿನ್ನಲೆ ಎಸ್​ಐಟಿ ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲಾಗಿದೆ. ಧರ್ಮಸ್ಥಳದ ವಿರುದ್ಧ ಬುರುಡೆ ಗ್ಯಾಂಗ್ ಷಡ್ಯಂತ್ರ ಪ್ರಾಥಮಿಕ ತನಿಖೆಯಲ್ಲಿ ಸಾಬೀತಾಗಿದೆ. ಚಿನ್ನಯ್ಯ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠ್ಠಲ ಗೌಡ, ಟಿ. ಜಯಂತ್ ಹಾಗೂ ಸುಜಾತಾ ಭಟ್ ಸೇರಿ ಆರೂ ಆರೋಪಿಗಳು ಅಪರಾಧ ಕೃತ್ಯದಲ್ಲಿ ಶಾಮೀಲಾಗಿರುವ ಬಗ್ಗೆ ಎಸ್​ಐಟಿ ದೃಢಪಡಿಸಿದೆ.

ಹಣದ ಆಮಿಷಕ್ಕೆ ಒಳಗಾಗಿ ಎ೧ ಚಿನ್ನಯ್ಯ ಬುರುಡೆ ಕಥೆ ಕಟ್ಟಿದ್ದ. ಬುರುಡೆ ಗ್ಯಾಂಗ್ ಚಿನ್ನಯ್ಯನಿಗೆ ಹಣ ಕೊಟ್ಟು ಪುಸಲಾಯಿಸಿತ್ತು. ಅಪರಿಚಿತ ಶವಗಳನ್ನು ಹೂತಿದ್ದೇನೆಂದು ಚಿನ್ನಯ್ಯನಿಂದ ಸುಳ್ಳು ಹೇಳಿಸಿ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿತ್ತು. ಚಿನ್ನಯ್ಯನಿಗೆ ಮೊದಲಿಂದ ಪರಿಚಿತನಾಗಿದ್ದ ವಿಠ್ಠಲಗೌಡ ಮಹೇಶ್ ತಿಮರೋಡಿ ಮನೆಗೆ ಆತನನ್ನು ಕರೆದೊಯ್ದಿದ್ದ. ತಿಮರೋಡಿ ಮನೆಯಲ್ಲಿ ನಡೆದಿದ್ದ ಸಭೆಯಲ್ಲಿ ಮಟ್ಟಣ್ಣನವರ್, ಜಯಂತ್, ವಿಠ್ಠಲಗೌಡ ಭಾಗಿಯಾಗಿದ್ದು, ಧರ್ಮಸ್ಥಳ ಮೇಲ್ವಿಚಾರಕರ ವಿರುದ್ಧ ಪಿತೂರಿಗೆ ಪ್ಲ್ಯಾನ್ ನಡೆದಿತ್ತು. ಅದರಂತೆ ತಲೆ ಬುರುಡೆಯೊಂದನ್ನು ಚಿನ್ನಯ್ಯನಿಗೆ ಕೊಟ್ಟು ಪೊಲೀಸರಿಗೆ ದೂರು ಕೊಡಿಸಿದ್ದರು. ನ್ಯಾಯಾಧೀಶರ ಮುಂದೆ ಚಿನ್ನಯ್ಯ ಹೇಳಿಕೆ ಕೊಡುವಂತೆ ಪ್ರೇರೇಪಿಸಿದ್ದರು.

ಧರ್ಮಸ್ಥಳ ಪ್ರಕರಣ ಸಂಬಂಧ ಇತ್ತೀಚೆಗೆ ಸ್ವಾಮೀಜಿ ಒಬ್ಬರ ಹೆಸರನ್ನು ಮಹೇಶ್​​ ಶೆಟ್ಟಿ ತಿಮರೋಡಿ ಉಲ್ಲೇಖಿಸಿದ್ದರು. ನಾನು ಮತ್ತು ಚಿನ್ನಯ್ಯ ಆ ಮಠಕ್ಕೆ ಹೋಗಿರುವುದು ಸತ್ಯ. ನಮ್ಮ ಜೊತೆಗೆ ಸೌಜನ್ಯ ಮನೆಯವರೂ ಬಂದಿದ್ದರು. ಆ ವೇಳೆ ಸ್ವಾಮೀಜಿ ಮುಂದೆ ಒಂದೂವರೆ ಗಂಟೆಗಳ ಕಾಲ ಚಿನ್ನಯ್ಯ ಎಲ್ಲವನ್ನೂ ಹೇಳಿದ್ದಾನೆ. ಯಾರೆಲ್ಲ ಅತ್ಯಾಚಾರ ಎಸಗಿದ್ದಾರೆ, ಮಾಡಿಸಿದ್ದಾರೆ ಎಂಬುದನ್ನು ಆತ ಬಹಿರಂಗಪಡಿಸಿದ್ದ ಎಂದು ತಿಳಿಸಿದ್ದರು. ಮತ್ತೊಂದೆಡೆ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಕೋರ್ಟ್​​ ಜಾಮೀನು ನೀಡಿದರೂ ಬಿಡುಗಡೆ ಭಾಗ್ಯಮಾತ್ರ ಸಿಕ್ಕಿಲ್ಲ. ನವೆಂಬರ್​ 26ರಂದು ಚಿನ್ನಯ್ಯಗೆ ನ್ಯಾಯಾಲಯದಿಂದ ಜಾಮೀನು ಮಂಜೂರು ಆಗಿತ್ತು. ಇಬ್ಬರು ಜಾಮೀನುದಾರರು, 1 ಲಕ್ಷ ಭದ್ರತೆ ಬಾಂಡ್ ನೀಡಲು ಕೋರ್ಟ್​​ ಆದೇಶಿಸಿತ್ತು. ಆದರೆ, ಯಾರೂ ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಇನ್ನೂ ಶಿವಮೊಗ್ಗದ ಜೈಲಿನಲ್ಲಿಯೇ ಚಿನ್ನಯ್ಯ ಇರುವಂತಾಗಿದೆ.

Shorts Shorts